ಮೂಡಬೆಟ್ಟು : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಮಧ್ವನಗರ ಮೂಡಬೆಟ್ಟು ನಿವಾಸಿ ಸುಮನೇಶ್ ಹೆಗ್ಡೆ (42) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನದಿಯಲ್ಲಿ ತೇಲಿ ಬರುತ್ತಿದ್ದ ಶವವನ್ನು ಗಮನಿಸಿದ ಮಾಜಿ ನಗರಸಭೆ ಸದಸ್ಯ ಚಿನ್ಮಯಮೂರ್ತಿ ಮತ್ತು ಅವರ ತಂಡವು ಶವವನ್ನು ದಡಕ್ಕೆ ಸೇರಿಸಿತು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶೀತಲೀಕೃತ ಶವ ರಕ್ಷಣಾ ಘಟಕದಲ್ಲಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದರು.