Header Ads Widget

ಥಾಯ್ಲೆಂಡ್‌ : ಬಸ್ಸಿಗೆ ಬೆಂಕಿ; 3 ಶಿಕ್ಷಕರು, 20 ವಿದ್ಯಾರ್ಥಿಗಳು ಸಜೀವ ದಹನ

ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 23 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್‌ನ ಬ್ಯಾಂಕಾಕ್‌ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ. ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 3 ಜನ ಶಿಕ್ಷಕರು 20 ಜನ ವಿದ್ಯಾರ್ಥಿಗಳು ಮೃತಟ್ಟಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.