ಮಲ್ಪೆ: -ಗಾಂಧೀಜಿಯವರಂತಹ ವ್ಯಕ್ತಿಗಳು ಪ್ರಪಂಚದಲ್ಲಿ ಯಾರೂ ಇರಲು ಅಸಾಧ್ಯ ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಅರ್ಥ ಮಾಡಿದಾಗ ಅವರಲ್ಲಿರುವ ಅಪೂರ್ವ ಶಕ್ತಿ ನಮಗೆ ತಿಳಿಯಲು ಸಾಧ್ಯ ಎಂದು ರೆಡ್ ಕ್ರಾಸ್ ಸೊಸೈಟಿ ಉಡುಪಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಗಾಂಧಿ ಜಯಂತಿಯ ಪ್ರಯುಕ್ತ ನೆಹರು ಯುವ ಕೇಂದ್ರ ಜಿಲ್ಲಾಡಳಿತ ಉಡುಪಿ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಲ್ಪೆ ಸಮುದ್ರ ತೀರದಲ್ಲಿ ನಡೆದ ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತ ನಾಡಿದರು.
ಮಾನಸಿಕ ಸ್ವಚ್ಛತೆ ಭೌತಿಕ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಯ ಬಗ್ಗೆ ಗಾಂಧೀಜಿಯವರು ಹೆಚ್ಚಿನ ಒತ್ತನ್ನು ನೀಡಿದರು ಈ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಗಾಂಧೀಜಿಯವರಿಗೆ ಸಲ್ಲಿಸಿದ ಅಪೂರ್ವ ನಮನವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಸುಕನ್ಯಾ ಮೇರಿ ನೆರವೇರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸರ್ಕಾರಿ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಪ್ರೊ. ರಘು ನಾಯ್ಕ್, ಮಮತಾ, ಸರಸ್ವತಿ ಯುವಕ ಮಂಡ ಲದ ಅಧ್ಯಕ್ಷ ಪ್ರಸಾದ್ ಉಡುಪಿ ಎಸ್.ಕೆ.ಪಿ ಎ ಅಧ್ಯಕ್ಷ ಸುಧೀರ್ ಶೆಟ್ಟಿ, ಮಾನವ ಹಕ್ಕು, ಮಹಾ ಮೈತ್ರಿಯ ಪ್ರೀತಿ ತಂಗಪ್ಪನ್ ನೆಹರು ಯುವ ಕೇಂದ್ರದ ಅಧಿಕಾರಿ ಶ್ರೀದೇವಿ ರಾವ್ ಮುಂತಾ ದವರು ಉಪಸ್ಥಿತರಿದ್ದರು ಸ್ವಚ್ಛ ಭಾರತ್ ಫ್ರೆಂಡ್ಸ್ ನ ರಾಘವೇಂದ್ರ ಪ್ರಭು ಕವಾ೯ಲು ಸ್ವಚ್ಚತಾ ಪ್ರತಿಜ್ಞಾವಿಧಿ ಬೋಧಿಸಿ ದರು.
ಕಾಯ೯ಕ್ರಮದಲ್ಲಿ ತೆಂಕನಿಡಿಯೂರು ಪ್ರ.ದ ಕಾಲೇಜು ಮತ್ತು ಸರಸ್ವತಿ ಯುವಕ ಮಂಡಲ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹ ಕಾರದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ನಡೆಯಿತು.