ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಕ್ಟೋಬರ್ 7 ರಂದು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ತಂಬಾಕು ನಿಯಂ ತ್ರಣ ಕಾರ್ಯಕ್ರಮ ಜರಗಿತು.
ಮುಖ್ಯ ಅಭ್ಯಾಗತಾರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲಾ ಆರೋಗ್ಯ ಸಲಹೆಗಾರರಾದ ಶ್ರೀಮತಿ ಮಂಜುಳಾ ಶೆಟ್ಟಿ ವಿವಿಧ ಉದಾಹರಣೆಗಳ ಮೂಲಕ ಗಾಂಜಾ, ಅಪೀಮು, ಸಿಗರೇಟ್, ಹುಕ್ಕಾ, ಗುಟ್ಕಾ ಇದರ ಸೇವನೆ ಯುವಕರ ಮೇಲೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಬೀರುವ ಪರಿಣಾಮಗಳ ಮಾಹಿತಿ ನೀಡಿದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್ ಅಧ್ಯಕ್ಷತೆ ವಹಿಸಿ ದ್ದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ಸ್ವಾಗತಿಸಿದರು.
ಸಹಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ಕಾರ್ಯಕ್ರಮ ನಿರೂಪಿ ಸಿದರು.