ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳ ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳ ದೇವಸ್ಥಾನದಲ್ಲಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 98/2024 ಕಲಂ. 314, 316(2), 316(4), 318(2), 318(4) BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯ ಬಗ್ಗೆ ಗಂಗೊಳ್ಳಿ ಠಾಣಾ ಪಿ.ಎಸ್.ಐ ಹರೀಶ್.ಆರ್, ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ನಾಗರಾಜ, ಶಾಂತರಾಮ ಶೆಟ್ಟಿ , ರಾಘವೇಂದ್ರ, ಸಂದೀಪ ಕುರಣಿ ಹಾಗೂ ಚಾಲಕ ದಿನೇಶ ರವರನ್ನೊಳಗೊಂಡ ತಂಡ, ಪ್ರಕರಣದ ಆರೋಪಿಯಾದ ದೇವಸ್ಥಾನದ ಅರ್ಚಕ ನರಸಿಂಹ ಭಟ್ (43), ಶಿರಸಿ ಎಂಬಾತನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿ, ಆತನನ್ನು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿ ಕೊಂಡಿದ್ದು, ಆರೋಪಿಯು ತನ್ನ ಸ್ವಂತಕ್ಕಾಗಿ ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿರುತ್ತಾನೆ.
ಸದರಿ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಜಪ್ತಿ ಮಾಡಿದ ಚಿನ್ನಾಭರಣಗಳ ವಿವರ 1) 40 ಗ್ರಾಂ ತೂಕದ ಚಿನ್ನದ ಜೋಬಿನ ಸರ-1(ಅಂದಾಜು ಮೌಲ್ಯ ರೂ 3,20,000/-), 2) 73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ ( ಹವಳ ಸೇರಿ) -1 (ಅಂದಾಜು ಮೌಲ್ಯ ರೂ 5,84,000/-), 3) 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1 (ಅಂದಾಜು ಮೌಲ್ಯ ರೂ 5,84,000/-), 4) 6 ಗ್ರಾಂ ತೂಕದ ಚಿನ್ನದ ತಾಳಿ-3 (ಅಂದಾಜು ಮೌಲ್ಯ ರೂ 48,000/-), 5) 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ -1 (ಅಂದಾಜು ಮೌಲ್ಯ ರೂ 5,12,000/- ). ಒಟ್ಟು ರೂ 20,48,000/- ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿ ಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.