Header Ads Widget

ಅ. 24, 25 ಮತ್ತು 26ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ನೇತೃತ್ವದಲ್ಲಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅ. 24, 25 ಮತ್ತು 26ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ ನಡೆಯಲಿದ್ದು, ಯೋಗ ಗುರು ಬಾಬಾ ರಾಮದೇವ್ ಉದ್ಘಾಟಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ಶ್ರೀಪಾದರು ತಿಳಿಸಿದ್ದಾರೆ.


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು, ಪುತ್ತಿಗೆ ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು ಮತ್ತು ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಆಚಾರ್ಯ ಬಾಲಕೃಷ್ಣ, ಪದ್ಮಶ್ರೀ ಚ.ಮ. ಕೃಷ್ಣಶಾಸ್ತ್ರಿ, ಮಂಗಳೂರು ಶ್ರೀನಿವಾಸ ವಿ.ವಿ. ಕುಲಾಧಿಪತಿ ಡಾ. ರಾಘವೇಂದ್ರ ರಾವ್, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಎಐಒಸಿ ಅಧ್ಯಕ್ಷೆ ಪ್ರೊ. ಸರೋಜಾ ಭಾಟಿಯಾ, ಎಐಐಸಿ ಕಾರ್ಯದರ್ಶಿ ಪ್ರೊ. ಕವಿತಾ ಹೋಲೆ  ಭಾಗವಹಿಸಲಿದ್ದಾರೆ.
ಭಾರತದ ಹಲವು ಭಾಗಗಳಿಂದ 300ಕ್ಕೂ ಹೆಚ್ಚು ವಿದ್ವಾಂಸರು ಆಗಮಿಸಲಿದ್ದಾರೆ. 

ಭಾರತದ ಪ್ರಸಿದ್ಧ ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕ ಪ್ರದರ್ಶನ, 30ಕ್ಕೂ ಅಧಿಕ ಪುಸ್ತಕಗಳ ಬಿಡುಗಡೆ ನಡೆಯಲಿದೆ ಎಂದು ಶ್ರೀಪಾದರು ತಿಳಿಸಿದರು.

ಭಾರತೀಯ ವಿದ್ವತ್ ಪರಿಷತ್ತಿನ ಅಧ್ಯಕ್ಷ ಡಾ. ವೀರನಾರಾಯಣ ಪಾಂಡುರಂಗಿ ಮಾತನಾಡಿದರು. ಭಾರತೀಯ ವಿದ್ವತ್ ಪರಿಷತ್ತಿನ ಪ್ರಮುಖರಾದ ಪ್ರೊ. ಶಿವಾನಿ, ಡಾ. ಭಾಸ್ಕರ ಜೋಶಿ, ದಿನಕರ ಮರಾಠೆ, ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರಿದ್ದರು.