Header Ads Widget

ಯುಪಿಎಂಸಿ - ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 26ರಂದು 2024-25ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜರಗಿತು.

ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಮಧ್ಯವಾರ್ಷಿಕ ವರದಿ ಮಂಡಿಸಿ ಕಾಲೇಜಿನ ಏಳಿಗೆ  ಮತ್ತು ವಿದ್ಯಾರ್ಥಿಗಳ ಪ್ರಗತಿಯಲ್ಲಿ ಉಪನ್ಯಾಸಕರ ಮತ್ತು ಪೋಷಕರ ಪಾತ್ರ ಅತಿ ಮುಖ್ಯವಾಗಿ ರುತ್ತದೆ ಎಂದು ವಿವರಿಸಿದರು.

ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ಪ್ರಸಕ್ತ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ ಉಮೇಶ್ ಕಾಮತ್ ಅಧ್ಯಕ್ಷರಾಗಿ, ಶ್ರೀಮತಿ ಶಾಂತಿ ಕಾರ್ಯದರ್ಶಿಗಳಾಗಿ ಮತ್ತು ಅಬ್ದುಲ್ ಹಮೀದ್, ಹನಿಲ ಡಿಸೋಜ, ಜಯಂತಿ, ಝಾಕೀರ್ ಹುಸೈನ್, ವೈಶಾಲಿ ಇವರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ರಕ್ಷಕ ಶಿಕ್ಷಕ ಸಂಘದ ನಿಕಪೂರ್ವ ಅಧ್ಯಕ್ಷರಾದ ಶ್ರೀ ಅಬ್ದುಲ್ ಹಮೀದ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್ ಉಪಸ್ಥಿತರಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ ಚಂದ್ರಶೇಖರ್ ಸ್ವಾಗತಿಸಿದರು, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ಹರಿಕೇಶವ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ಕಾರ್ಯಕ್ರಮ ನಿರೂಪಿ
ಸಿದರು.