ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ 41ನೇ ಪುಣ್ಯತಿಥಿಯನ್ನು ಆಚರಿಸಲಾಯಿತು. ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.ನಂತರ ಮಾತನಾಡಿದ ಅವರು ದಿ.ಇಂದಿರಾ ಗಾಂಧಿಯವರು ಜಾರಿಗೆ ತಂದಿದ್ದ ಹಲವು ಕ್ರಾಂತಿಕಾರಿ ಯೋಜನೆಗಳು ಜನಮಾನಸದಲ್ಲಿ ಇಂದಿರಾಜಿಯವರು ಅಚ್ಚಳಿಯದ ನೆನಪಾಗಿ ಉಳಿಯುವಂತೆ ಮಾಡಿವೆ.ದೇಶದ ಪ್ರತೀ ಕುಟುಂಬವು ಒಂದಲ್ಲ ಒಂದು ರೀತಿಯಲ್ಲಿ ಇಂದಿರಾಗಾಂಧಿ ಅವರ ಜನಪರ ಯೋಜನೆಗಳ ಫಲಾನುಭವಿಗಳು ಆಗಿರುವುದನ್ನು ನಾವು ಗಮನಿಸಬಹುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ,ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು,,ಜಿಲ್ಲಾ ಅನಿವಾಸಿ ಭಾರತೀಯ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ವಾಹೀದ್ ಶೇಖ್,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಡುಪಿ ಸಂಯೋಜಕರಾದ ಸುರೇಶ್ ಶೆಟ್ಟಿ, ಜಿಲ್ಲಾ ಸೈನಿಕ ಘಟಕದ ಅಧ್ಯಕ್ಷರಾದ ಕ್ಸೇವಿಯರ್,ಗೋಪಾಲ್ ಪೂಜಾರಿ,ಶ್ರೀಧರ್ ಬಿ.,ಹಮ್ಮದ್ ಮಹಿಳಾ ನಾಯಕಿಯರಾದ ಜ್ಯೋತಿ ಹೆಬ್ಬಾರ್,ಚಂದ್ರಿಕಾ ಶೆಟ್ಟಿ,ಐರಿನ್ ಅಂದ್ರಾದೆ,ಆಶಾ ಚಂದ್ರಶೇಖರ್, ಮೀನಾಕ್ಷಿ ಮಾಧವ. ಬನ್ನಂಜೆ, ಜಯಶ್ರೀ ಶೇಟ್,ಸುಕನ್ಯಾ ಪೂಜಾರಿ,ಕಡೆಕಾರ್ ಮತ್ತಿತರರು ಉಪಸ್ಥಿತರಿದ್ದರು.ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಸರ್ವರನ್ನೂ ಸ್ವಾಗತಿಸಿ ಧನ್ಯವಾದವಿತ್ತರು.ಇದೇ ಸಂದರ್ಭದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಣತೆಗಳನ್ನು ಹಚ್ಚಿ ಸಿಹಿ ಹಂಚುವುದರ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.