ಕುಂಜಿಬೆಟ್ಟಿನ ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಖ್ಯಾತ ಸಾಹಿತಿ ಶ್ರೀಮತಿ.ಶೋಭಾ ಹರಿಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಅವರು ಮಾತನಾಡುತ್ತಾ “ಸುದೀರ್ಘ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದುದು ಪ್ರತಿಯೋಬ್ಬ ಕನ್ನಡಿಗನ ಆದ್ಯ ಕರ್ತವ್ಯ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಶ್ಯಾಮ್ ರಾಜೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿನೋದಾ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಕುಮಾರಿ ವಿಧಾತ್ರಿ ನಟರಾಜ ಅಡಿಗ ಅತಿಥಿಗಳನ್ನು ಪರಿಚಯಿಸಿದರು. ಕುಮಾರಿ ತನ್ವಿ ವಂದನಾರ್ಪಣೆಗೈದರು. ಕುಮಾರಿ ಪ್ರಕೃತಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕ ಶ್ರೀ ರಮೇಶ್ ಭಟ್ ಕೆ ಕಾರ್ಯಕ್ರಮವನ್ನು ಸಂಘಟಿಸಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾ0ಸ್ಕೃತಿಕ ಕಾರ್ಯಕ್ರಮಗಳು ಜರಗಿದವು.