Header Ads Widget

ಎಚ್. ಶ್ರೀಧರ ಹಂದೆಗೆ ಉಪ್ಪೂರ ಪ್ರಶಸ್ತಿ

ಕೋಟ ಅಮೃತೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸೇವೆಯಾಟದಂದು ಶ್ರೀ ಕ್ಷೇತ್ರದ ವತಿಯಿಂದ ನೀಡುವ ಪ್ರಾಚಾರ್ಯ ನಾರ್ಣಪ್ಪ ಉಪ್ಪೂರ ಪ್ರಶಸ್ತಿಗೆ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಚ್. ಶ್ರೀಧರ ಹಂದೆಯವರು ಭಾಜನರಾಗಿದ್ದಾರೆ.  

ದಿನಾಂಕ 17/11/24 ರಂದು ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಥಮ ಸೇವೆಯಾಟದಂದು ರಾತ್ರಿ ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿರುವುದು.