Header Ads Widget

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ರಿಕ್ಷಾ ಚಾಲಕರೊಂದಿಗೆ ರಾಜ್ಯೋತ್ಸವ ಸಂಭ್ರಮ

 

ಉದ್ಯಾವರ : ಕರ್ನಾಟಕ ರಾಜ್ಯೋತ್ಸವದ ಸಂಭ್ರಮವನ್ನು ಉದ್ಯಾವರ ಲಯನ್ಸ್ ಕ್ಲಬ್ ಸನ್ ಶೈನ್ ಸ್ಥಳೀಯ ಸಂಪಿಗೆ ನಗರ ರಿಕ್ಷಾ ಚಾಲಕ ಮಾಲಕರೊಂದಿಗೆ ಸಂಭ್ರಮದಿಂದ ಆಚರಿಸಿದರು.

ಪ್ರತಿಷ್ಠಿತ ಎಂಸಿಸಿ ಬ್ಯಾಂಕ್ ಉದ್ಯೋಗಿ ಲಯನ್ ರಿತೇಶ್ ಡಿಸೋಜ ಕರ್ನಾಟಕ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಬಳಿಕ ಎಲ್ಲಾ ಆಟೋರಿಕ್ಷಾ ಚಾಲಕರಿಗೆ ಮತ್ತು ಆಗಮಿಸಿದ ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಧ್ವಜ ಮತ್ತು ಶಾಲು ನೀಡಲಾಯಿತು.

ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯ ಲಯನ್ ರೊಯ್ಸ್ ಫೆರ್ನಾಂಡಿಸ್, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲಯನ್ ರೋನಾಲ್ಡ್ ರೆಬೆಲ್ಲೊ, ಕಾರ್ಯದರ್ಶಿ ಲಯನ್ ಜೆರಾಲ್ಡ್ ಪಿರೇರಾ, ಕೋಶಾಧಿಕಾರಿ ಲಯನ್ ಅನಿಲ್ ಮಿನೇಜಸ್, ಸಂಪಿಗೆನಗರ ರಿಕ್ಷಾ ಚಾಲಕ ಮಾಲಕರ ಸಂಘದ ಸಂತೋಷ್, ರವಿ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರ್ದೇಶಕರಾದ ಲಯನ್ ಎಡ್ವಿನ್ ಲೂವಿಸ್ ಸ್ವಾಗತಿಸಿದರೆ, ಲಯನ್ ಐವನ್ ಡಿಸಿಲ್ವ ಧನ್ಯವಾದ ಸಮರ್ಪಿಸಿದರು. ಲಯನ್ ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.