ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಈ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟವು ನವೆಂಬರ್ :04 ಮತ್ತು 05 ರಂದು ಕಿದಿಯೂರು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲಾ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜರುಗಲಿದೆ.
ಅಂದು ಬೆಳಗ್ಗೆ 9:30 ಕ್ಕೆ ಕಾಣಿಯೂರು ಮಠದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳರು ಶುಭಶಂಸನೆಗೈಯಲಿದ್ದು, ಶಾಸಕ ಎ. ಯಶಪಾಲ್ ಸುವರ್ಣ ಅಧ್ಯಕ್ಷತೆಯೊಂದಿಗೆ ನಾಡೋಜ ಡಾ. ಜಿ. ಶಂಕರ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲೆಯ ವಿವಿಧ ವಲಯಗಳ 750 ಮಂದಿ ಕ್ರೀಡಾಪಟುಗಳು ಈ ಕೂಟದಲ್ಲಿ ಭಾಗವಹಿಸಲಿದ್ದು, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಉಡುಪಿ ಜಿಲ್ಲಾ ತಂಡವನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದೆಂದು ಸಂಘಟಕರು ತಿಳಿಸಿದ್ದಾರೆ.