Header Ads Widget

ಹಲ್ಮಿಡಿ ಶಾಸನದ ಪ್ರತಿಕೃತಿ~ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಲೋಕಾರ್ಪಣೆ

ಕನ್ನಡ ಭಾಷೆಯ ಮೊಟ್ಟ ಮೊದಲ ಶಿಲಾಶಾಸನ ಎಂಬ ಹೆಗ್ಗಳಿಕೆಯ ಕ್ರಿಸ್ತ ಶಕ 450 ನೇ ಸಾಲಿನ ಪಾಚೀನವಾದ ಹಲ್ಮಿಡಿ ಶಾಸನದ ಮಹತ್ವವನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಆಶಯದಿಂದ ನಗರದ ಭುಜಂಗ ಶೆಟ್ಟಿ ಪಾರ್ಕ್ನಲ್ಲಿ ಸ್ಥಾಪಿಸಿರುವ ಹಲ್ಮಿಡಿ ಶಾಸನದ ಪ್ರತಿಕೃತಿಗೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ  ಆರ್ ಹೆಬ್ಬಾಳಕರ್ ಲೋಕಾರ್ಪಣೆ ಮಾಡಿದರು.



ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.