ಮಂಗಳೂರು: ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಶನಿವಾರ ಬೀಚ್ ರೆಸಾರ್ಟ್ ನಲ್ಲಿ ಕೊಠಡಿ ಪಡೆದಿದ್ದ ಮೂವರು ಯುವತಿಯರು ಮೈಸೂರು ಮೂಲದವರೆಂದು ತಿಳಿದು ಬಂದಿದೆ.
ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತ ಯುವತಿಯರು ಎನ್ನಲಾಗಿದೆ.
ಇಂದು ಬೆಳಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ಯುವತಿಯರು ತೆರಳಿದ್ದರು. ಈ ವೇಳೆ ಓರ್ವ ಯುವತಿ ಮಳುಗಿದ್ದು, ಉಳಿದವರು ರಕ್ಷಿಸಲು ಹೋದಾಗ ಈ ಘಟನೆ ಸಂಭಂವಿಸಿರ ಬಹುದೆಂದು ಶಂಕಿಸಲಾಗಿದೆ. ಸ್ವಿಮ್ಮಿಂಗ್ ಫೂಲ್ ಆರು ಅಡಿಯಷ್ಟು ಆಳವಿತ್ತು ಎಂದು ತಿಳಿದು ಬಂದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.