ದಿನಾಂಕ 1-11-2024 ರಂದು ಉಡುಪಿಯ ಅಜ್ಜರ ಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು,ಜಿಲ್ಲಾ,ರಾಜ್ಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು, ಸುಮಾರು 2 ವರ್ಷಗಳ ಹಿಂದೆ ಸೈಂಟ್ ಮೇರಿಸ್ ದ್ವೀಪದಿಂದ ಮಲ್ಪೆಯ ಕಡಲ ತೀರದವರೆಗೆ 3.80 ಕಿಲೋಮಿಟರ್ ದೂರವನ್ನು ಅರಬ್ಬಿ ಸಮುದ್ರದ ಅಲೆಗಳಿಗೆ ಎದುರಾಗಿ ಈಜಿ ಸಾಧನೆಗೈದ ವಿಕಲಚೇತನರಾದ ರಾಜಶೇಖರ್ ಪಿ ಶಾಮರಾವ್ ಉಡುಪಿ ಇವರನ್ನು ಕ್ರೀಡಾ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್, ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದಂತಹ ಡಾ. ಕೆ ವಿದ್ಯಾಕುಮಾರಿ, ಇತರ ಅತಿಥಿಗಳ ಸಮ್ಮುಖದಲ್ಲಿ ಉಡುಪಿ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.