Header Ads Widget

"ಪ್ರಜ್ಯೋತಿ – 2024"

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಉಡುಪಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಪ್ರಜ್ಯೋತಿ – ೨೦೨೪’ ದಿನಾಂಕ ೧೭/೧೧/೨೦೨೪ ರಂದು ಭಾವಪ್ರಕಾಶ ಸಭಾಂಗಣದಲ್ಲಿ ನೆರವೇರಿತು. 


. ಈ ಸಂದರ್ಭದಲ್ಲಿ ೧೯೯೪ನೇ ವರ್ಷದ ಹಳೆವಿದ್ಯಾರ್ಥಿ, ಪ್ರಸ್ತುತ ವಿ.ಪಿ.ವಿ.ಎಸ್ ಕೊಟ್ಟಕಲ್ ಆಯುರ್ವೇದ ಕಾಲೇಜಿನ ಸಹಪ್ರಾಧ್ಯಾಪಕರಾದ  ಡಾ. ಗೋಪಿಕೃಷ್ಣ ಶ್ರೀರಾಮ್‌ರವರು ‘ಆಯುರ್ವೇದಿಕ್ ಮ್ಯಾನೇಜ್‌ಮೆಂಟ್ ಆಫ್ ಸ್ಕಿನ್ ಡಿಸೀಸಸ್ ಇನ್ ಜನರಲ್ ಪ್ರಾಕ್ಟೀಸ್’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣದೊ೦ದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

 ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಉಜಿರೆ ಇದರ ಕಾರ್ಯದರ್ಶಿಯ ವರಾದ ಡಿ. ಹರ್ಷೇಂದ್ರ ಕುಮಾರ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನ್ಯಾಶನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್, ನಡೆಸಿದ ಭಾರತೀಯ ವೈದ್ಯ ಪದ್ಧತಿಯ ಸಂಸ್ಥೆಗಳ ವೈದ್ಯಕೀಯ ಮೌಲ್ಯಮಾಪನ ಸಂಸ್ಥೆ, ನವದೆಹಲಿ ಹಾಗೂ ರಾಷ್ಟ್ರೀಯ  ಗುಣಮಟ್ಟ ನಿಯಂತ್ರಣ ಸಂಸ್ಥೆಯ ಮೌಲ್ಯಮಾಪನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಕಾಲೇಜಿನ ಸಾಧನೆಯ ಬಗ್ಗೆ ಅಪಾರ ಹೆಮ್ಮೆಯಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಕುತ್ಪಾಡಿ, ಉಡುಪಿ ಇಲ್ಲಿನ ೧೯೮೪-೮೯ ಸಾಲಿಗೆ ಪ್ರವೇಶ ಹೊಂದಿ ಪದವೀಧರರಾದ ವಿದ್ಯಾರ್ಥಿ ಸಮೂಹ-ಚಿರಂತನ ೧೯೮೪ ಇವರು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. 

ಈ ಬಾರಿ ಹಿರಿಯ ವಿದ್ಯಾರ್ಥಿಗಳು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಕೆ.ಆರ್. ರಾಮಚಂದ್ರ ಹಾಗೂ ಶರೀರ ರಚನಾ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಶ್ರೀಧರ ಹೊಳ್ಳರವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.  ಬಳಿಕ ಹಳೆ ವಿದ್ಯಾರ್ಥಿಗಳ ಸಂಘಕ್ಕೆ ಸಹಾಯಧನವಿತ್ತವರನ್ನು ಗುರುತಿಸಿ ಸನ್ಮಾನಿಸಲಾಯಿತು. 

ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಹೊಸ ಕಾರ್ಯಕಾರಿಣಿ ಸಮಿತಿಯ ಪದಗ್ರಹಣವನ್ನು ನೆರವೇರಿಸ
ಲಾಯಿತು. ಅಧ್ಯಕ್ಷರಾದ ಡಾ. ಭರತೇಶ ಎರವರು ನೂತನ ಅಧ್ಯಕ್ಷರಾಗಿ ನೇಮಕಗೊಂಡ ಪುತ್ತೂರಿನ ಖ್ಯಾತ ಪ್ರಶಾಂತಿ ಆಯು
ರ್ವೇದ ಸೆಂಟರ್‌ನ ಡಾ. ಶಶಿಧರ ಕಜೆಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ.ಯವರು ಸಂಸ್ಥೆಯ ಯಶಸ್ಸಿಗೆ ಕಾರಣರಾದ ಬೋಧಕ ಹಾಗೂ ಬೋಧಕೇತರ ವೃಂದದವರನ್ನು ಪ್ರಶಂಶಿಸಿ ಹಾಗೂ ಹಳೆಬೇರು ಹೊಸ ಚಿಗುರು ಕೂಡಿ ಸಂಸ್ಥೆಯ ಘನತೆಯನ್ನು ಉಳಿಸಿ ಬೆಳೆಸಬೇಕೆಂದು  ಕರೆ ನೀಡಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಭರತೇಶ್ ಎ. ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಉತ್ತಮ ವೈದ್ಯರನ್ನು ನಿರ್ಮಿಸುವಲ್ಲಿ ಕಾಲೇಜಿನ ಪಾತ್ರವನ್ನು ಪ್ರಶಂಶಿಸಿದರು. ಈ ಸಂದರ್ಭದಲ್ಲಿ ಅತಿಥಿಗಳಾದ ಹಾಗೂ ನೂತನವಾಗಿ ಎಸ್.ಡಿ.ಎಮ್ ಆಯುರ್ವೇದ ಸಂಸ್ಥೆಯ ನಿರ್ದೇಶಕರಾಗಿ ನೇಮಕಗೊಂಡ ಡಾ. ಪ್ರಸನ್ನ ಎನ್. ರಾವ್‌ರವರನ್ನು ಸನ್ಮಾನಿಸಲಾಯಿತು.

 ವೇದಿಕೆಯಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಾಸನ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡ ಡಾ. ಶೈಲಜ ಯು.ರವರನ್ನು ಸನ್ಮಾನಿಸ ಲಾಯಿತು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳ ಸುದ್ದಿ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಡಾ. ನಾರಾಯಣ ಟಿ. ಅಂಚನ್‌ರವರು ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಡಾ. ವ್ಯಾಸರಾಜ್ ತಂತ್ರಿಯವರು ವಾರ್ಷಿಕ ವರದಿಯನ್ನು ವಾಚಿಸಿದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ. ಮೊಹಮ್ಮದ್ ಇಕ್ಬಾಲ್ ಅವರು ವಂದಿಸಿದರು. ಡಾ. ರಶ್ನಿ ಕಲ್ಕೂರರವರು ಕಾರ್ಯಕ್ರಮವನ್ನು ನಿರೂಪಿಸಿದರು.