ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು.
ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
KVS ವಿದ್ಯಾರ್ಥಿಯಾದ ತಾನು ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಕೇಂದ್ರೀಯ ವಿದ್ಯಾಲಯದಿಂದ ಪಡೆದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ದೊಡ್ಡ ಕನಸು ಕಾಣುವಂತೆ ಮತ್ತು ಅದನ್ನು ನನಸು ಮಾಡಿಕೊಳ್ಳಲು ಪರಿಶ್ರಮ ಪಡುವಂತೆ ಪ್ರೇರೇಪಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕರೀಂ ಖಾನ್ ಸ್ವಾಗತಿಸಿ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಕೆವಿಎಸ್‌ನ ಪಾತ್ರ, ಪರಂಪರೆ ಮತ್ತು ಸಾಧನೆಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕಾರ್ಯಕ್ರಮಗಳು ಮತ್ತು ಭಾಷಣ ನಡೆಯಿತು. ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ನಡೆಯಿತು.
2023-24ರ CBSE ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಚಂದನಾ ಮತ್ತು ನಾಗಾರ್ಜುನ ಅವರ ಗಮನಾರ್ಹ ಸಾಧನೆಗಾಗಿ ಅವರನ್ನು ಅಭಿನಂದಿಸಲಾಯಿತು.
ಶಿಕ್ಷಕ ರಾಗೇಶ್ ಎಂ ವಂದಿಸಿದರು. ಶಿಕ್ಷಕಿ ರಿತು ಶರ್ಮಾ ನಿರೂಪಿಸಿದರು.