Header Ads Widget

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆಯು ದಿನಾಂಕ 30.11.2024 ನೇ ಶನಿವಾರದಂದು ಪೂರ್ಣಪ್ರಜ್ಞ ಕಾಲೇಜಿನ ಪ್ರಾಚಾರ್ಯರಾದ ಡಾ, ರಾಮು ಎಲ್‌. ಇವರ ಅಧ್ಯಕ್ಷತೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ ನಡೆಯಿತು. ಈ ಸಭೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಡಾ. ರಮೇಶ್‌ ಟಿ.ಎಸ್‌ ಇವರು ಕಾಲೇಜಿನ ಆಗು ಹೋಗುಗಳ ಬಗ್ಗೆ, ಪರೀಕ್ಷಾ ವಿಚಾರಗಳು ಹಾಗೂ ಶಿಸ್ತು ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಮು ಎಲ್‌. ಇವರು ವಹಿಸಿ ಮುಂದಿನ ದಿನಗಳಲ್ಲಿ ಕಾಲೇಜಿನ ಆಡಳಿತ ಮಂಡಳಿಯವರು ಅಭಿವೃದ್ಧಿಯ ಬಗ್ಗೆ ತೆಗೆದುಕೊಂಡ ವಿಚಾರಗಳನ್ನು ಪೋಷಕರಿಗೆತಿಳಿಸಿದರು. 

ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಸಭೆಯು ನಡೆಯಿತು. ಈ ಸಭೆಯಲ್ಲಿ ಉಪಾಧ್ಯಕ್ಷರಾಗಿ ಶ್ರೀಯುತ ಸಂತೋಷ್‌ ಕುಮಾರ್‌, ಜಂಟಿ ಕಾರ್ಯದರ್ಶಿಗಳಾಗಿ ಡಾ. ಸತೀಶ್‌ ರಾವ್‌ ಹಾಗೂ ಐದು ಹೊಸ ಸದಸ್ಯರನ್ನು ನೇಮಕಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸಂಯೋಜಕರಾದ ಡಾ. ಆನಂದ ಆಚಾರ್ಯರು ಪ್ರಸ್ತಾವನ ನುಡಿಗಳೊಂದಿಗೆ ಸ್ವಾಗತಿಸಿದರು.

ಸಭೆಯಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಡಾ. ವಿನಯಕುಮಾರ್‌, ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಸತೀಶ್‌ ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಶ್ರೀಮತಿ ಪ್ರತಿಭಾ ಭಟ್‌ ಹಾಗೂ ಕು. ವಾಗ್ದೇವಿ ಮಧ್ಯಸ್ಥ ಇವರು ಪ್ರಾರ್ಥಿಸಿದ್ದು, ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಶಿವಕುಮಾರ ಬಿ.ಎ. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.