Header Ads Widget

ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ ೨೦೨೪ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭಾ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ ಬ್ರಹ್ಮಾವರ ಪತ್ರಕರ್ತರ ಸಂಘವು ವಡ್ಡರ್ಸೆಯವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತ ಬಂದಿದೆ.

ಜ.೧೧ರಂದು ಸಂಜೆ ೫ಗಂಟೆಗೆ ಬ್ರಹ್ಮಾವರ ಬಂಟರಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.