ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಸುಮಾ (35) ಎಂಬ ಮಹಿಳೆ 6 ವರ್ಷದ ಮಗ ಹಾಗೂ 1 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ನಂತರ ತಾನೂ ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಘೋರ ಕೃತ್ಯಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.