Header Ads Widget

ಅಂಬಲಪಾಡಿ ಜಂಕ್ಷನ್: ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಬಿದ್ದ ಕಾರು!

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್ ರಾ.ಹೆ.66ರಲ್ಲಿ ಇಂದು ಮುಂಜಾನೆ 3 ಗಂಟೆಗೆ ಸಂಭವಿಸಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿ ಬಿದ್ದಿದೆ.