Header Ads Widget

ಮತ್ತೆ ಬಂದಿದೆ ಹೊಸ ವರ್ಷ, ತರಲಿ ಹೊಸ ಹರ್ಷ

ಹೊಸ ವರ್ಷಕ್ಕೆ ಸ್ವಾಗತ... 2025 ಹೊಸತನ ಅನ್ನುವುದು ಸೃಷ್ಟಿಯ ನಿಯಮ. ಹೀಗಾಗಿಯೇ ಸದಾ ಒಂದಲ್ಲ ಒಂದು ಹೊಸತನಕ್ಕಾಗಿ...


ಹೊಸ ವರ್ಷಕ್ಕೆ ಸ್ವಾಗತ... ಹೊಸತನ ಅನ್ನುವುದು ಸೃಷ್ಟಿಯ ನಿಯಮ. ಹೀಗಾಗಿಯೇ ಸದಾ ಒಂದಲ್ಲ ಒಂದು ಹೊಸತನಕ್ಕಾಗಿ ನಮ್ಮ ಮನಸ್ಸು ತುಡಿಯುತ್ತಿರುತ್ತದೆ. ಹೊಸ ಜೀವನ, ಹೊಸ ಕಾರು, ಹೊಸ ಮನೆ, ಹೊಸ ಹುದ್ದೆ, ಹೊಸ ಗೆಳೆಯರು, ಹೊಸ ಸ್ಥಳಗಳು, ಹೊಸ ಮೊಬೈಲ್... ಹೀಗೆ ಹೊಸ ಬಟ್ಟೆ ಯಿಂದ ಹಿಡಿದು ಹೊಸ ಚಪ್ಪಲಿಯವರೆಗಿನ ಪ್ರತಿಯೊಂದು ಹೊಸತನಗಳನ್ನು ನಾವು ತುಂಬಾ ಹರ್ಷದಿಂದ ಸ್ವಾಗತಿಸುತ್ತೇವೆ. 


ಅದೇ ರೀತಿ ಈಗ ಹಳೆಯ ನೋವು, ನೆನಪುಗಳನ್ನೆಲ್ಲಾ ಬದಿಗೆ ಸರಿಸಿ ಹೊಸ ನಿರೀಕ್ಷೆ ಹಾಗೂ ಕನಸು ಗಳೊಂದಿಗೆ ಮತ್ತೊಂದು ಹೊಸ ವರ್ಷವನ್ನು ನಾವು ಬರಮಾಡಿಕೊಳ್ಳುತ್ತಿದೇವೆ. ಈ ಹೊಸ ವರ್ಷ ನಿಮ್ಮ ಜೀವನದಲ್ಲಿ ಹಲವು ಹೊಸತನಗಳೊಂದಿಗೆ ಹೊಸ ಹರ್ಷ ತರಲಿ


. ಕಳೆದ ವರ್ಷ ಮಾಡಿದ ರೆಸಲ್ಯೂಶನೇ ಇನ್ನೂ ಪೂರ್ಣವಾಗ್ಲಿಲ್ಲ. ಈ ವರ್ಷ ಇನ್ನೇನು ಮಾಡೋದು ಎಂದು ಹೊಸ ವರ್ಷದ ಪ್ರಾರಂಭದಲ್ಲಿ ನಮಗೆಲ್ಲ ಅನಿಸೋದು ಸರ್ವೇಸಾಮಾನ್ಯ. ರೆಸಲ್ಯೂಶನ್‌ ಗಳೆ ಹೊಸ ವರ್ಷದ ಮೊದಲ ನಾಲ್ಕು ದಿನಗಳಿಗೆ ಮಾತ್ರ ಸೀಮಿತವಾಗಿಬಿಟ್ಟಿದೆ.


ವರ್ಷದ ಮೊದಲ ದಿನದಂದು ಈ ವರ್ಷ ಇದನ್ನು ಸಾಧಿಸಿಯೇ ತೀರುತ್ತೇನೆ ಎಂಬ ಸಂಕಲ್ಪ ಮಾಡು ತ್ತೇವೆ. ಆದರೆ ಕೆಲಸದ ಜಂಜಾಟದ ನಡುವೆ ನಾವು ಸಾಧಿಸಬೇಕಾದ ವಿಷಯವನ್ನೇ ಮರೆತು ಬಿಡುತ್ತಿ ದ್ದೇವೆ. ಆ ರೀತಿ ಮಾಡಿದಾಗ ಕಳೆದ ವರ್ಷಕ್ಕೂ ಈ ವರ್ಷಕ್ಕೂ ಏನಿದೆ ವ್ಯತ್ಯಾಸ. ದಿನಗಳು ಅಥವಾ ವರ್ಷ ನಮಗಾಗಿ ಕಾಯುವುದಿಲ್ಲ. ಅದರ ಪಾಡಿಗೆ ಅದು ಸಾಗುತ್ತಿರುತ್ತದೆ. ನಾವು ಅದರ ಜತೆ ಸಾಗುತ್ತಿರ ಬೇಕು ಅಷ್ಟೇ. ಆದರೆ ನಾವು ಸಮಯದ ಜತೆ ಎಷ್ಟು ಬಾರಿ ಸರಿಯಾಗಿ ಸಾಗಿದ್ದೇವೆ ಅನ್ನೋದನ್ನು ಮನನ ಮಾಡಿಕೊಳ್ಳಬೇಕು.


 ನಮ್ಮ ಸಂಕಲ್ಪ ಸದಾ ಇರಲಿ ;-  ನಾವು ಪ್ರತೀ ವರ್ಷ ಹೊಸ ವರ್ಷದಂದು ಸಂಕಲ್ಪಗಳನ್ನು ಮಾಡುತ್ತೇವೆ. ಆದರೆ ವರ್ಷವಿಡೀ ಅದನ್ನು ಅನುಸರಿಸುವುದು ಕಷ್ಟವಾಗುತ್ತದೆ. ನಾವು ಮಾಡಿಕೊಂಡ ಸಂಕಲ್ಪಗಳ ಪೈಕಿ ವಾಸ್ತವವಾಗಿ ಕಾರ್ಯರೂಪಕ್ಕೆ ಬರುವುದು ಕೆಲವು ಮಾತ್ರ ಎಂಬ ಸತ್ಯ ನಮಗೆ ತಿಳಿದಿದೆ. ಈ ನಿರ್ಣಯಗಳನ್ನು ಗಟ್ಟಿಯಾಗಿ ಅನುಸರಿಸುವುದು ನಮ್ಮ ಕೈಯಲ್ಲಿ ಇರುವುದರಿಂದ ಮೊದಲು ನಾವು ದೃಢ ಸಂಕಲ್ಪವನ್ನು ಮಾಡಬೇಕು. 


ಧನಾತ್ಮಕ ಚಿಂತನೆ ಮೈಗೂಡಿಸಿ ಪ್ರತೀ ದಿನ, ಕ್ಷಣ ಅದನ್ನು ನೆನಪಿಸಿಕೊಳ್ಳುತ್ತಿರಬೇಕು. ಈ ವರ್ಷ ಇದನ್ನು ಮಾಡಬೇಕು ಎಂದುಕೊಂದಿದ್ದರೆ ಮಾರನೇ ದಿನವೇ ಮರೆತುಬಿಡುವುದಲ್ಲ. ಬದಲಾಗಿ ನಾವು ಅದನ್ನು ಸಂಪೂರ್ಣಗೊಳಿಸಲು ಎಡವಿದೆ, ನಾವು ತಲುಪಬೇಕಾದ ಗುರಿಯನ್ನು ನೆನಪಿಸಿಕೊಳ್ಳುತ್ತಿರಬ ಆ ಕೆಲಸ ಕೆಲಸ ಆಗುವರೆಗೂ ಬಿಡಬಾರದು ಹೀಗಾದರೆ ನಾವು ಎಣಿಸಿದ ಕಾಯ೯ ಯಾವುದೇ ತೊಂದರೆ ಇಲ್ಲದೆ ಆಗುವುದು,


 ಮನಸ್ಸು ಕಂಟ್ರೋಲ್ ನಲ್ಲಿ ಇರಲಿ ;- ನಮ್ಮ ಮನಸ್ಸು ನಾವು ಹೇಳಿದಂತೆಯೇ ಇರುತ್ತದೆ. ಈ ವರ್ಷ ಒಳ್ಳೆಯದನ್ನು ಮಾಡಬೇಕು ಎಂದು ಪ್ರತಿ ಕ್ಷಣ ನಮ್ಮ ಮನಸ್ಸಿಗೆ ಹೇಳುತ್ತಾ ಅದನ್ನೇ ಯೋಚಿಸುತ್ತಾ ಇದ್ದರೆ ಖಂಡಿತ ಬದಲಾವಣೆ ಸಾಧ್ಯವಿದೆ.


ಪ್ರತೀ ದಿನವನ್ನು ಹೊಸವರ್ಷವೆಂದು ಭಾವಿಸುವುದು ರೆಸಲ್ಯೂಷನ್‌ ಗಳನ್ನು ಪೂರ್ಣಗೊಳಿಸಲು ಇರುವ ಇನ್ನೊಂದು ಹಾದಿ. ನಮಗೆ ದಿನದಲ್ಲಿ 24 ಗಂಟೆ ಸಿಗುವುದರಿಂದ ಅಷ್ಟು ಗಂಟೆಯಲ್ಲಿ ಎಷ್ಟು ಸಮಯವನ್ನು ನಾವು ಒಳ್ಳೆಯ ಕೆಲಸಕ್ಕೆ ಸದುಪಯೋಗಪಡಿಸಿಕೊಳ್ಳುತ್ತೇವೆ ಎಂಬುವುದರ ಕಡೆ ಗಮನ ಹರಿಸಬೇಕು. ಹೊಸ ವರ್ಷ ಎಂಬುವುದು ಖಾಲಿ ಪುಸ್ತಕದಂತೆ. ಪೆನ್ನು ನಮ್ಮ ಕೈಯಲ್ಲಿ ಇರುವುದರಿಂದ ಸುಂದರವಾದ ಕಥೆಯನ್ನು ಬರೆಯಲು ಇದು ನಮಗೆ ಉತ್ತಮ ಅವಕಾಶ.


ಈ ಕಥೆ ನಮ್ಮ ಬದುಕಿನ ಹೊಸ ಅಧ್ಯಾಯವಾಗಬೇಕು.ನಾವೆಲ್ಲರೂ ಕೇವಲ ಮೋಜು, ಮಸ್ತಿಯಲ್ಲಿ ಕಾಲ ಕಳೆಯದೆ ನಮ್ಮ ಬದುಕು ಮತ್ತೊಬ್ಬರ ಬದುಕಿಗೆ ಆಸರೆಯಾಗ ಬೇಕು. ನಮ್ಮ ಕೆಲಸದ ಸಂಸ್ಥೆಯ ಅಭಿವೃದ್ಧಿಗೆ ಪಣ ತೊಟ್ಟು ಕೆಲಸ ಮಾಡಬೇಕು. ಏಕೆಂದರೆ ಸಂಸ್ಥೆಯು ಅಭಿವೃದ್ಧಿಯಾದರೆ ನಮ್ಮ ಅಭಿವೃದ್ಧಿ ಸಾಧ್ಯ' ಈ ಕ್ಯಾಲೆಂಡರ್ ವಷ೯ದಲ್ಲಿ ಒಂದಿಷ್ಟು ಸಂಕಲ್ಪಗಳನ್ನು ಈಡೇರಿಸಲು ಹೆಚ್ಚು ಕೆಲಸ ಮಾಡೋಣ ಈ ಉತ್ತಮ ಸಂಕಲ್ಪಗಳು ನಮ್ಮ ಬದುಕಿಗೆ ಹೊಸ ಅಥ೯ ಕೊಡುವಲ್ಲಿ ಅನುಮಾನವಿಲ್ಲ.

✍🏼 ರಾಘವೇಂದ್ರ ಪ್ರಭು,ಕವಾ೯ಲು