Header Ads Widget

ಮಣಿಪಾಲ: ಬೆಳ್ಳಂಬೆಳಗ್ಗೆ ವ್ಯಕ್ತಿಯ ಭೀಕರ ಹತ್ಯೆ!

ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ಮಣಿಪಾಲ ಲಕ್ಷ್ಮೀಂದ್ರನಗರದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ್ (38) ಎಂದು ಗುರುತಿಸಲಾಗಿದೆ.

ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರ ಕುಕ್ ಎಂದು ತಿಳಿದುಬಂದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್ , ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.