Header Ads Widget

ಉಡುಪಿ: ಹೊಸ ವರ್ಷದ ರಜೆಗಳ ಹಿನ್ನಲೆ ವಾಹನ ಸಂಚಾರದಲ್ಲಿ ಬದಲಾವಣೆ

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.


'ಕಲ್ಸಂಕ ವೃತ್ತ':

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು. 

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.


ಕರಾವಳಿ ಜಂಕ್ಷನ್:

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.


 ಮಲ್ಪೆ:

ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆ ಬರುವುದು.

ಸಾರ್ವಜನಿಕರು ನಾಳೆ ದಿನಾಂಕ 28.12.2024 ರಿಂದ ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.