Header Ads Widget

ಪೆರ್ಡೂರು: ಮರಕ್ಕೆ ಬೈಕ್ ಡಿಕ್ಕಿ; ಯುವಕ ಸಾವು!

ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಸಂತೋಷ್(28) ಎಂದು ಗುರುತಿಸಲಾಗಿದೆ.

ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.