Header Ads Widget

ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ!

ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ನಲ್ಲಿ ನಡೆದಿದೆ.

ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದ್ದು.

ಮಸಾಜ್ ಸೆಂಟರ್ನ ಗಾಜುಗಳನ್ನು ಪುಡಿಗೈದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಅವಾಜ್ ಹಾಕಿದ್ದಾರೆ ಅಲ್ಲದೆ ಪಾರ್ಲರ್ ನಲ್ಲಿ ಇದ್ದ ಯುವತಿಯರ ಮೇಲೆಯೂ ಹಲ್ಲೆ ಮಾಡಿ ರಾಮ ಸೇನಾ ಸಂಘಟೆನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್ಗಳ‌ನ್ನು ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.