ಕೊಡವೂರು ಸ.ಮಾ.ಹಿ.ಪ್ರಾ ಶಾಲಾ 151ನೇ, ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘದ 60ನೇ ಹಾಗೂ ದುರ್ಗಾ ಮಹಿಳಾ ಮಂಡಲದ 23ನೇ ಸಂಯುಕ್ತ ವಾರ್ಷಿಕೋತ್ಸವವು ಜ.24 ರಂದು ಕೊಡವೂರು ಶಾಲಾ ಮೈದಾನದಲ್ಲಿ ಜರುಗಿತು.
ಅಂದು ಬೆಳಿಗ್ಗೆ ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಸಂಜೆಯ ಸಭಾಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಆರೋಗ್ಯಪೂರ್ಣ ಸಮಾಜಕ್ಕೆ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆಗಳು ಸಮರ್ಪಕವಾಗಿರಬೇಕು.ಇಂದಿನ ಪೀಳಿಗೆಯ ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು,ಉತ್ತಮ ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕು ಎಂದರು
.ಸಮಾಜ ಸೇವಕ ರವಿ ಕಟಪಾಡಿ,ಕೊಡುಗೈ ದಾನಿ ಹೆರಿಯಣ್ಣ ಕಾಂಚನ್ ಕೊಡವೂರು, ಶೈಕ್ಷಣಿಕ ಪ್ರತಿಭೆ ಡಾ|ಮೈಥಿಲಿ.ಕೆ ಇವರನ್ನು ಸಮ್ಮಾನಿಸಲಾಯಿತು.ಗಂಭೀರ ಖಾಯಿಲೆಗೆ ತುತ್ತಾದ ಅರ್ಥಿಕ ಅಶಕ್ತರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ದತ್ತಿನಿಧಿ, ಕ್ರೀಡಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಗರಸಭಾ ಸದಸ್ಯ ವಿಜಯ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು,ಶ್ರೀ ಶಂಕರನಾರಾಯಣ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಟಿ.ರಾಘವೇಂದ್ರ ರಾವ್, ನ್ಯಾಯವಾದಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಮತ್ಸ್ಯೋದ್ಯಮಿಗಳಾದ ಶಶಿಧರ ಬಿ ಕುಂದರ್,ಶೇಖರ್ ಪುತ್ರನ್ ನೆರ್ಗಿ, ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ, ಹರ್ಬ್ ಲೈಪ್ ನ್ಯೂಟ್ರಿಷನ್ ವೆಲ್ನೆಸ್ ಕೋಚ್ ಶುಭ ವಿಕ್ರಮ್, ನಿವೃತ್ತ ಮುಖ್ಯೋಪಾಧ್ಯಾಯಿನಿ ವಾರಿಜಾ ಮಧುಸೂದನ್ ಭಾಗವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಪೈ,ಶ್ರೀ ದುರ್ಗಾ ಮಹಿಳಾ ಮಂಡಲದ ಅಧ್ಯಕ್ಷೆ ಮೀನಾಕ್ಷಿ ಮಾಧವ, ಯುವಕ ಸಂಘದ ಗೌರವಾಧ್ಯಕ್ಷ ಪ್ರಭಾತ್ ಕೋಟ್ಯಾನ್, ವಿದ್ಯಾರ್ಥಿ ನಾಯಕ ಮೋಕ್ಷಿತ್ ಉಪಸ್ಥಿತರಿದ್ದರು.
ಶಾಲಾ ವರದಿಯನ್ನು ಮುಖ್ಯ ಶಿಕ್ಷಕಿ ಪುಷ್ಪಾವತಿ, ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘದ ವರದಿ ಯನ್ನು ಕಾರ್ಯದರ್ಶಿ ಜಗದೀಶ್ ಶೆಟ್ಟಿ ಬೆಳ್ಕಳೆ ವಾಚಿಸಿದರು.ಯುವಕ ಸಂಘದ ಅಧ್ಯಕ್ಷ ದೀಪಕ್ ವಿ ದೇವಾಡಿಗ ಸ್ವಾಗತಿಸಿದರು.ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕೊಡವೂರು ನಿರೂಪಿಸಿ ವಂದಿ ಸಿದರು.