Header Ads Widget

ಉಡುಪಿ: ಶಾರದಾ ವಸತಿ ಶಾಲೆಗೆ ಬಂದಿರುವುದು ಹುಸಿ ಬಾಂಬ್ ಬೆದರಿಕೆ ಕರೆ – ಎಸ್ಪಿ ಸ್ಪಷ್ಟನೆ



ಉಡುಪಿ: ಉಡುಪಿ ನಗರ ಠಾಣಾ ವ್ಯಾಪ್ತಿಯ ಕುಂಜಿಬೆಟ್ಟುವಿನ  ಶಾರದಾ ವಸತಿ ಶಾಲೆಗೆ ಇಮೇಲ್ ನಲ್ಲಿ ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.


ಪ್ರಾಂಶುಪಾಲರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ತಕ್ಷಣ ಬಿಡಿಡಿಎಸ್ ತಂಡದಿಂದ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.


ಹುಸಿ ಬಾಂಬ್ ಬೆದರಿಕೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದೇವೆ. ಇಮೇಲ್ ಸಂದೇಶ ಕಳುಹಿಸಿದ ವ್ಯಕ್ತಿಯ ವಿರುದ್ಧ ಕಾನೂನು‌ ರೀತಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದರು.