Header Ads Widget

'ಎಸ್.ಸಿ.ಎಸ್.ಪಿ. - ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ' ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ


ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್.ಸಿ.ಎಸ್.ಪಿ. - ಟಿ.ಎಸ್.ಪಿ.) ಸುಮಾರು ರೂ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಅವರು ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನಾಂದೋಲನವನ್ನು ರೂಪಿಸಿರುವ ರಾಜ್ಯ ಬಿಜೆಪಿ ಈಗಾಗಲೇ 14 ತಂಡಗಳನ್ನು ರಚಿಸಿದ್ದು, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಆಗ್ರಹಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರಾಜ್ಯ ತಂಡದ ಪ್ರಮುಖರಾದ ಸಂಸದ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರು ಭಾಗವಹಿಸಲಿದ್ದಾರೆ.

ಫೆ.25ರಂದು ಉಡುಪಿ ಜಿಲ್ಲಾ ವ್ಯಾಪ್ತಿಯ ಕಾರ್ಕಳ, ಕಾಪು, ಉಡುಪಿ ನಗರ, ಉಡುಪಿ ಗ್ರಾಮಾಂತರ, ಕುಂದಾಪುರ ಮತ್ತು ಬೈಂದೂರು ಮಂಡಲಗಳಲ್ಲಿ ಪೂರ್ವಭಾವಿ ಸಭೆಗಳು ನಡೆಯಲಿದ್ದು, ಫೆ.28ರಂದು ನಡೆಯುವ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಪೆರಣoಕಿಲ ಶ್ರೀಶ ನಾಯಕ್, ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸದಾನಂದ ಉಪ್ಪಿನಕುದ್ರು, ಸುರೇಶ್ ಶೆಟ್ಟಿ ಕಾಡೂರು, ಜಯರಾಮ ಸಾಲ್ಯಾನ್, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಸದಾನಂದ ಬಳ್ಕೂರ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಮೋರ್ಚಾಗಳ ಅಧ್ಯಕ್ಷರುಗಳಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಂಧ್ಯಾ ರಮೇಶ್, ವಿಜಯ ಕೊಡವೂರು, ರುಡಾಲ್ಫ್ ಡಿಸೋಜ, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಶ್ರೀಕಾಂತ್ ಕಾಮತ್, ನಳಿನಿ ಪ್ರದೀಪ್ ರಾವ್, ಅನಿತಾ ಆರ್.ಕೆ., ಮಂಡಲ ಅಧ್ಯಕ್ಷರುಗಳಾದ ದಿನೇಶ್ ಅಮೀನ್, ರಾಜೀವ ಕುಲಾಲ್, ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಿ. ಶೆಟ್ಟಿ, ಸಚಿನ್ ಪೂಜಾರಿ, ಗೋಪಾಲಕೃಷ್ಣ ರಾವ್, ಸತೀಶ್ ಪೂಜಾರಿ ಬೋಳ, ಮಹೇಂದ್ರ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.