ಶಾಲಿಮಾರ್ ಬಾಗ್ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಘೋಷಿಸಿದ್ದು, ಪರ್ವೇಶ್ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ.
ಫೆಬ್ರವರಿ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಏರಿದೆ. 27 ವರ್ಷಗಳ ನಂತರ ಬಿಜೆಪಿ ದೆಹಲಿಯಲ್ಲಿ ಸರ್ಕಾರ ರಚಿಸುತ್ತಿದೆ.