Header Ads Widget

ಕರಾವಳಿ ಭಾಗದಿಂದ ಕುಂಭಮೇಳಕ್ಕೆ ತೆರಳಲು ವಿಶೇಷ ರೈಲು!


17ನೇ ತಾರೀಖು ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ.ಈ ರೈಲಿನಲ್ಲಿ ತೆರಳುವ ಪ್ರಯಾಣಿಕರಿಗೆ ಟಿಕೆಟ್ ವಿವರವನ್ನು ಶೀಘ್ರದಲ್ಲೇ ತಿಳಿಸಲಾಗವುದು.ಪ್ರಯಾಗ್‌ರಾಜ್ ತೆರಳಲಿರುವ ಯಾತ್ರಾರ್ಥಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಿ.ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರ ಮೌಖಿಕ ಸೂಚನೆಯ ಮೇರೆಗೆ ಈ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಹರ್ಷಿಸುತ್ತೇನೆ.

~ಕೋಟ ಶ್ರೀನಿವಾಸ ಪೂಜಾರಿ