Header Ads Widget

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಕು.ಯಶಸ್ವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಕು.ಯಶಸ್ವಿ ಶೇ.82.4% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ.ಭವಾನಿ ಶಂಕರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಡಾ.ಜಿ. ಶಂಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇಲ್ಲಿ ದ್ವಿತೀಯ ಎಂಕಾಮ್ ವಾಸಂಗ ಮಾಡುತ್ತಿದ್ದಾರೆ. ಇವರು ಪುತ್ತೂರು ಸುಬ್ರಹ್ಮಣ್ಯ ನಗರದ ವಿಜಯ್ ಸನಿಲ್ ಹಾಗೂ ಶ್ರೀಮತಿ ಸುಮಾ ಸನಿಲ್ ದಂಪತಿಗಳ ಪುತ್ರಿಯಾಗಿದ್ದಾಳೆ.