ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಪಕ್ಷಕ್ಕೆ ಪ್ರಚಂಡ ಗೆಲುವಿನ ಮೂಲಕ ಹಿಂದೂ ವಿರೋಧಿ ನಿಲುವಿನ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ದೆಹಲಿ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಹಿಂದೂಗಳ ಪವಿತ್ರ ಕುಂಭ ಮೇಳದ ಬಗ್ಗೆ ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯವರ ಅವಹೇಳನಕಾರಿ ಹೇಳಿಕೆ, ಕೇಜ್ರಿವಾಲ್ ಯಮುನಾ ನದಿಗೆ ವಿಷ ಹಾಕಿದ ಅಪ್ರಬುದ್ಧ ಹೇಳಿಕೆಗೆ ದೆಹಲಿಯ ಪ್ರಜ್ಞಾವಂತ ಮತದಾರರು ಮತದಾನದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿಯವರ ವಿಕಸಿತ ಭಾರತ ನಿರ್ಮಾಣಕ್ಕೆ ದೆಹಲಿಯ ಗೆಲುವು ಹೊಸ ಚೈತನ್ಯ ತುಂಬಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಗೆಲುವು ಶಕ್ತಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.