Header Ads Widget

ಅಂತರ್ ಜಿಲ್ಲಾ ಶಾಲಾ ಕಾಲೇಜು ಕಳ್ಳತನದ ಆರೋಪಿ ಸೆರೆ

ದಿನಾಂಕ 21/02/2025 ರಿಂದ ದಿನಾಂಕ 22/02/2025ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಕಛೇರಿಯ ಬಾಗಿಲಿಗೆ ಹಾಕಿದ ಬೀಗವನ್ನು ಯಾರೋ ಕಳ್ಳರು ಒಡೆದು ಒಳ ಪ್ರವೇಶಿಸಿ ಕಛೇರಿಯ ಕಪಾಟು ಮತ್ತು  ಮೇಜಿನ ಡ್ರಾವರನ್ನು ಒಡೆದು ನಗದು ಹಣ ಅಂದಾಜು 1,50,000/- ಮತ್ತು 3 ಡಿವಿಆರ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಲ್ಲದೆ, ಶಾಲೆಯ ಸಿಸಿಟಿವಿಯನ್ನು ಹಾಳು ಮಾಡಿರುತ್ತಾರೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 26/2025 ಕಲಂ 331(3) 331(4), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ದಿನಾಂಕ: 06.03.2025 ರಿಂದ ದಿನಾಂಕ 07.03.2025ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು, ಒಳಪ್ರವೇಶಿಸಿ ಕಪಾಟಿನ ಬಾಗಿಲು ತೆಗೆದು, ರಿಜಿಸ್ಟರ್ ಗಳನ್ನು ಚಲ್ಲಾಪಿಲ್ಲಿ ಮಾಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 35/2025 ಕಲಂ 331(3), 331(4), 62 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿರುತ್ತದೆ.

ದಿನಾಂಕ 04.03.2025 ರಿಂದ ದಿನಾಂಕ 05.03.2025ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸಂತ ಮರಿಯಾ ಗೊರಟ್ಟಿ ಆಂಗ್ಲ ಮಾದ್ಯಮ ಶಾಲೆಯ ಕಛೇರಿಯ ಬೀಗವನ್ನು ಯಾರೋ ಕಳ್ಳರು ಒಡೆದು ಒಳಪ್ರವೇಶಿಸಿ, ಕಪಾಟಿನ ಬೀಗವನ್ನು ಮುರಿದು ಅದರಲ್ಲಿದ್ದ ನಗದು 60000/- ಮತ್ತು 5000/- ಮೌಲ್ಯದ ಸಿಸಿ ಕ್ಯಾಮರಾ ಡಿವಿಆರ್ ಕಳವು ಮಾಡಿರುವ ಬಗ್ಗೆ ಶಾಲಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 40/2025 ಕಲಂ 305, 331(3), 331(4) ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿ ಮತ್ತು ಸ್ವತ್ತು ಪತ್ತೆಯ ಬಗ್ಗೆ ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌ರವರ ನೇತೃತ್ವದ ಕಾರ್ಕಳ ನಗರ ಪೊಲೀಸ್ ಠಾಣಾ ಪಿ.ಎಸ್.ಐ ಶಿವಕುಮಾರ್, ಸಿಬ್ಬಂದಿಯವರಾದ ರಂಜಿತ್‌, ಶಿವಾನಂದ, ಕಾರ್ಕಳ ಗ್ರಾಮಾಂತರ ಠಾಣಾ ಚಂದ್ರಶೇಖರ, ಅಜೆಕಾರು ಠಾಣಾ ಸತೀಶ, ಪ್ರದೀಪ್‌ರವರನ್ನೊಳಗೊಂಡ ತಂಡ, ದಿನಾಂಕ: 20.03.2025 ರಂದು ನಿಟ್ಟೆ ಗ್ರಾಮದ ಸಂತ ಲಾರೆನ್ಸ್ ಫ್ರೌಡ ಶಾಲೆಯ ಸಮೀಪ ಅನುಮಾನಾಸ್ಪದವಾಗಿ ಬಿಳಿ ಬಣ್ಣದ ಕಾರಿನಲ್ಲಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಅರ್ಷಿತ್ ಅವಿನಾಶ್ ದೋಡ್ರೆ(24), ಯೋಜನಾ ನಗರ, ಬೈಂದೂರು ಎಂಬುದಾಗಿ ತಿಳಿಸಿದ್ದು, ಮೇಲ್ಕಾಣಿಸಿದ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಕರಣಗಳಿಗೆ ಸಂಬಂದಿಸಿದಂತೆ ಆಪಾದಿತನನ್ನು ವಶಕ್ಕೆ ಪಡೆಯಲಾಯಿತು. ಆಪಾದಿತನು ಕೃತ್ಯಕ್ಕೆ ಬಳಸಿದ್ದ ಸುಮಾರು 2,00,000/- ಮೌಲ್ಯದ  KA21N3929 Ritz ಕಾರು, 20,000/- ಮೌಲ್ಯದ ಮೊಬೈಲ್ ಫೋನ್, ನಗದು ರೂ 84,500/- ಮತ್ತು ಇತರೇ ಸ್ವತ್ತುಗಳನ್ನು ಮುಂದಿನ ಕ್ರಮದ ಬಗ್ಗೆ ಸ್ವಾದೀನಪಡಿಸಿಕೊಂಡು, ಆಪಾದಿತನನ್ನು ವಿಚಾರಣೆ ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾನ್ಯ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂದನಕ್ಕೆ ನೀಡಿರುತ್ತಾರೆ.