Header Ads Widget

ಮಲ್ಪೆ: ದಲಿತ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣ: ಐವರು ಅಂದರ್

 

ಮಲ್ಪೆ: ದಲಿತ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್ ಅವರನ್ನು ಅದೇ ದಿನ ರಾತ್ರಿ ನ್ಯಾಯಾಧೀಶರ ಮನೆ ಮುಂದೆ ಹಾಜರುಪಡಿಸಿದ್ದು ಮೂವರನ್ನು ಎ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.


ಇದೀಗ ಗುರುವಾರದಂದು ಬಂಧಿಸಿದ ಆರೋಪಿಗಳಾದ ಪಾರ್ವತಿ ಹಾಗೂ ಲೀಲಾ ಅವರನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.


ಮಲ್ಪೆ ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್‌ ಠಾಣೆಯ ಬೀಟ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.