Header Ads Widget

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

 
                                      

ದುಬೈ: ಕೊನೆಯ ಹಂತದವರೆಗೂ ಭಾರಿ ರೋಚಕವಾಗಿ ಸಾಗಿದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತವು 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು.



 252 ರನ್‌ಗಳ ಗುರಿ ಬೆನ್ನಟ್ಟಿದ ಭಾರತವು 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಜಯಭೇರಿ ಭಾರತದ ಪರ ರೋಹಿತ್ ಶರ್ಮಾ 76 ರನ್ (83 ಎಸೆತ, 7 ಬೌಂಡರಿ, 3 ಸಿಕ್ಸ್), ಶ್ರೇಯಸ್ ಅಯ್ಯರ್ 48 ರನ್ (62 ಎಸೆತ, 2 ಬೌಂಡರಿ, 2 ಸಿಕ್ಸ್), ಶುಭನ್ ಗಿಲ್ 31 ರನ್, ಕೆ.ಎಲ್. ರಾಹುಲ್ ಅಜೇಯ 34 ರನ್, ಅಕ್ಷರ್ ಪಟೇಲ್ 29 ರನ್, ಹಾರ್ದಿಕ್ ಪಾಂಡ್ಯ 18 ರನ್ ಗಳಿಸಿದರು.

 
ಇದಕ್ಕೂ ಮುನ್ನ ನ್ಯೂಜಿಲ್ಯಾಂಡ್ ಪರ ಡ್ಯಾರಿಲ್ ಮಿಚೆಲ್ 63 ರನ್ (101 ಎಸೆತ), ಮೈಕೆಲ್ ಬ್ರೇಸ್‌ವೆಲ್ 53 ರನ್ (40 ಎಸೆತ) ಹಾಗೂ ರಚನ್ ರವೀಂದ್ರ 37 ರನ್ (29 ಎಸೆತ) ಗಳಿಸಿದ್ದರು. ಇನ್ನು ಟೀಂ ಇಂಡಿ ಯಾ ಪರ ವರಣ್ ಚಕ್ರವರ್ತಿ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದುಕೊಂಡಿದ್ದರು.