ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿರು ವಂತಹ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಇನ್ಸ್ಪೆಕ್ಟರ್ ದೇವರಾಜ್ರಿಂದ ಫೈರಿಂಗ್ ಮಾಡಿದ್ದು, ಸದ್ಯ ಇಸಾಕ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಾ.4ರಂದು ಬಂಧಿಸಲು ಹೋದಾಗ ಎಸ್ಕೇಪ್ ಆಗಿದ್ದ. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಪರಾರಿ ಯಾಗಲು ಯತ್ನಿಸಿದ್ದ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈ ರಿಂಗ್ ಮಾಡಿರುವಂತಹ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ನಡೆದಿದೆ.
ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಗೊಂಡ ಇಸಾಕ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಟೋರಿಯಸ್ ಗರುಡ ಗ್ಯಾಂಗ್ನ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸಾಕ್ನನ್ನು ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸರು ಬೇಟೆ ಆಡಿದ್ದರು.