Header Ads Widget

ಮಾಧ್ಯಮ ಕ್ಷೇತ್ರದಲ್ಲಿನ ಅವಕಾಶಗಳು: ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಾಧ್ಯಮ ಕ್ಷೇತ್ರವು ತುಂಬಾ ವಿಶಾಲವಾಗಿದ್ದು, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಪ್ರವೃತ್ತಿಯಾಗಿ ಇದರಲ್ಲಿ ಅಂಕಣಕಾರರಾಗಿ, ವರದಿಗಾರರಾಗಿ, ನಿರೂಪಕರಾಗಿ ತಮ್ಮನ್ನು ತಾವು ಗುರುತಿಸಿಕೊಳ್ಳಬಹುದು, ಮಾತ್ರವಲ್ಲವೇ ಅದನ್ನು ತಮ್ಮ ವೃತ್ತಿಯಾಗಿಯೂ ಕೂಡ ಆಯ್ಕೆ ಮಾಡಿಕೊಳ್ಳಬಹುದು ಎಂದು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಶ್ರೀ ಸುಚಿತ್ ಕೋಟ್ಯಾನ್ ಹೇಳಿದರು.

 ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಆಯೋಜಿಸಿದ "ಕೆರಿಯರ್ ಆಪರ್ಚುನಿಟಿಸ್ ಇನ್ ಮೀಡಿಯಾ" ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಮಾಧ್ಯಮ ಕ್ಷೇತ್ರದ ಬೆಳವಣಿಗೆ ಮತ್ತು ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾದ ಮಾಹಿತಿ ನೀಡಿದರು.

 ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಸುಕನ್ಯ ಮೇರಿ ರವರು ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಂಡು ತಮ್ಮ ಜೀವನವನ್ನು ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಲ್, ಗ್ರಂಥಪಾಲಕ ಶ್ರೀ ಅನಿಲ್ ಕುಮಾರ್ ಜಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ ಹಾಗೂ ಮಾನವಿಕ ಸಂಘದ ಸಂಚಾಲಕ ಡಾ. ರಾಘವೇಂದ್ರ ಜಿಗಳೂರು ಅತಿಥಿ ಪರಿಚಯದೊಂದಿಗೆ ಸ್ವಾಗತಿಸಿ, ಇತಿಹಾಸ ವಿಭಾಗದ ಉಪನ್ಯಾಸಕ ಶ್ರೀ ಪ್ರೇಮನಾಥ್ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.