Header Ads Widget

ಬ್ರಹ್ಮಾವರ: ಮತ್ಸ್ಯಗಂಧ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲಿನ ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಚಾಂತಾರು ಗ್ರಾಮದ ಹಾಲಿನ ಡೈರಿ ಸಮೀಪದ ರೈಲ್ವೇ ಹಳಿಯಲ್ಲಿ ಸುಮಾರು 25 ರಿಂದ 35 ವರ್ಷ ವಯಸ್ಸಿನ ಅಪರಿಚಿತ ಪುರುಷನು ಮತ್ಸ್ಯಗಂಧ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೃತದೇಹ ಛಿದ್ರವಾಗಿ ಬಿದ್ದಿರುವುದು ಕಂಡುಬಂದಿದೆ. ರೈಲ್ವೆ ಕಂಬ ಸಂಖ್ಯೆ 681/6 ರ ಬಳಿ ತಲೆ ಮತ್ತು ಕೈಗಳು ಪತ್ತೆಯಾಗಿವೆ.

ಯಾವುದೋ ಕಾರಣಕ್ಕೆ ಮನನೊಂದು ಈ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತನ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.