ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮಾರ್ಚ್ 13 ರಂದು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನೈತಿಕ ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಜರಗಿತು.
ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ದಯಾನಂದ ಡಿ. ವಿದ್ಯಾರ್ಥಿಗಳಿಗೆ ತಾಳ್ಮೆ, ಬದುಕುವ ಕಲೆ, ವ್ಯಕ್ತಿತ್ವವೇ ವಿಕಸನಗೊಳ್ಳಲು ಎನ್ ಎಸ್ ಎಸ್ ಉತ್ತಮ ವೇದಿಕೆ, ತಂದೆ ತಾಯಿ, ಗುರು ಹಿರಿಯರು ಜೀವನದ ಆದರ್ಶವಾಗಿ ತೆಗೆದುಕೊಳ್ಳಬೇಕು, ಒಳ್ಳೆಯ ತನ, ಸಂಸ್ಕಾರ, ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು, ಜೀವನದಲ್ಲಿ ಗುರಿಯನ್ನು ಇಟ್ಟುಕೊಳ್ಳಿ, ಸಾಂಘಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್, ಸಹ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಾಗಶ್ರೀ ನಾಯ್ಕ್ ಸ್ವಾಗತಿಸಿದರು, ಜೀವನ್ ವಂದಿಸಿದರು, ನೇಹಾ ಪಿ. ಕಾರ್ಯಕ್ರಮ ನಿರೂಪಿಸಿದರು.