Header Ads Widget

ಉಪ್ಪಿನಂಗಡಿ : ಖಾಸಗಿ ಸ್ಲೀಪರ್ ಬಸ್ ಪಲ್ಟಿ; ಓರ್ವ ಪ್ರಯಾಣಿಕ ಸಾವು!

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಎ.4 (ಇಂದು) ಮುಂಜಾನೆ 5 ಗಂಟೆಗೆ ನಡೆದಿದೆ.

ಗುರುವಾರ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌, ಶುಕ್ರವಾರ ಮುಂಜಾನೆ ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿರುವಾಗ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಂತೆ, ಮುಂಜಾನೆಯ ಸಮಯ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಬಸ್‌ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಅಪಘಾತ ನಡೆದ ಕೂಡಲೇ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಗಾಯಾಳುಗಳನ್ನು ರಕ್ಷಣೆ ಮಾಡಿ, ಚಿಕಿತ್ಸೆಗೆಂದು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಸಾಗಿಸಲು ನೆರವಾದರು. ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತೆಯಾಗಿಲ್ಲ.

ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.