Header Ads Widget

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು.

ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದರು.

ಟೂರ್ನಮೆಂಟಿನಲ್ಲಿ ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದರು.

ಈ ಪಂದ್ಯಾವಳಿ ಉದ್ಘಾಟನೆಯನ್ನು ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ನಡೆಸಿಕೊಡಲಿದ್ದಾರೆ. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಘನ ಉಪಸ್ಥಿತಲಿರಲಿದ್ದು, ಮುಖ್ಯಮಂತ್ರಿ ಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಪಂದ್ಯಾವಳಿ ಕುರಿತು ಆಶಯ ನುಡಿಗಳನ್ನು ಆಡಲಿದ್ದಾರೆ.

ಪ್ರಸ್ತಾವಿಕವಾಗಿ ಎಚ್.ಬಿ.ಮದನಗೌಡರು ಮಾತನಾಡಲಿದ್ದಾರೆ.

ಸಂಸದರಾದ ಶ್ರೇಯಸ್ ಪಟೇಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿಲಿದ್ದು, ಹಾಸನ ಪತ್ರಕರ್ತರ ಸಂಘದ ಅಧ್ಯಕ್ಷ ರಾದ ವೇಣುಕುಮಾರ್ ಪ್ರೇರಣಾ ನುಡಿ ಹೇಳಲಿದ್ದಾರೆ.

ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲೆಯ ಎಲ್ಲ ವರ್ಗದ ಸರ್ಕಾರಿ ಅಧಿಕಾರಿಗಳು ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲ ಕಾರ್ಯನಿರತ ಪತ್ರಕರ್ತರ ಬಂಧುಗಳಿಗೆ ಈ ಎರಡು ದಿನಗಳ ಕ್ರೀಡಾಕೂಟದಲ್ಲಿ ತಾವೆಲ್ಲರೂ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. 

ಇದೇ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಲಾಯಿತು. 

ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಗಿರೀಶ್ ಗರಗ, ಭಾರತಿ ರಾಜನ್, ವಿಶ್ವನಾಥ್ ಸುವರ್ಣ ಅವರು ಉಪಸ್ಥಿತರಿದ್ದರು.