ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ (PUC Result 2025) ನಾಳೆ (ಏ.8ರಂದು) ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ನಾಳೆ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆಯಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ನಾಳೆ ಮಧ್ಯಾಹ್ನ 1.30 ರಿಂದಲೇ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ https://karresults.nic.in/ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಮಾರ್ಚ್1 ರಿಂದ ಮಾರ್ಚ್20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಗೆ ಹೋಲಿಸಿದ್ರೆ ಈ ಬಾರಿ ಎರಡು ದಿನಗಳ ಮುಂಚಿತವಾಗಿ ಫಲಿತಾಂಶ ಪ್ರಕಟವಾಗುತ್ತಿದೆ.