Header Ads Widget

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಬಾಲಕ ಸಾವು!

ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಬಾಲಕ ಸ್ಥಳೀಯ ಎಸ್ ಎಮ್ ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ಬಾಲಕ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಬಾಲಕ ವಂಶಿ ಜಿ ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸಾವನಪ್ಪಿದ್ದಾನೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸ್ಥಳ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಅತೀ ಶೀಘ್ರದಲ್ಲಿ ಗಮನಹರಿಸಬೇಕಾಗಿದೆ.