ಮಲ್ಪೆ ಬೀಚ್ ಬಳಿ ಇರುವ ಅಮ್ಮ ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹೋಟೆಲ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಈ ಘಟನೆ ಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.
ಘಟನೆ ತಿಳಿದು ಹಿನ್ನೆಲೆಯಲ್ಲಿ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ಮತ್ತಷ್ಟು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.