Header Ads Widget

ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಕ್ರೀಡಾಕೂಟ

ಉಡುಪಿ: ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಾರ್ಷಿಕ ಕ್ರೀಡಾಕೂಟ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.

ಉಡುಪಿ ನಗರ ಸಭೆಯ ಅಧ್ಯಕ್ಷರು ಪ್ರಭಾಕರ ಪೂಜಾರಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಕ್ರೀಡೆ ನಮಗೆ ದೈಹಿಕ ವ್ಯಾಯಾಮದ ಜ್ಯೊತೆಗೆ ಮಾನಸಿಕ ಆರೋಗ್ಯವನ್ನು ನೀಡುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಾಫಲ್ಯ ಟ್ರಸ್ಟ್ ಉಡುಪಿಯ ಅಧ್ಯಕ್ಷರು ಶ್ರೀಮತಿ ಹರಿಣಾ ರಮೇಶ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ಪ್ರೊ. ಶ್ರೀಧರ ಪ್ರಸಾದ್ ಕೆ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ, ಐಕ್ಯೂಎಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್ ಶ್ರೀಮತಿ ಗೌರಿ ಎಸ್ ಭಟ್ ಮತ್ತು ಸಾಫಲ್ಯ ಟ್ರಸ್ಟ್ ಉಡುಪಿ ಇದರ ನಿರ್ದೇಶಕಿ ಶ್ರೀಮತಿ ನಿರೂಪಮಾ ಪ್ರಸಾದ್ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಅತಿಥಿಗಳನ್ನು ಸ್ವಾಗತಿಸಿದರು. ಸಮಾಜಶಾಸ್ತç ವಿಭಾಗದ ಮುಖ್ಯಸ್ಥರು ಡಾ. ರಾಜೇಂದ್ರ ಕೆ ಕಾರ್ಯಕ್ರವನ್ನು ನಿರೂಪಿಸಿ, ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರು ಡಾ. ಮಂಜುನಾಥ ಅವರು ವಂದಿಸಿದರು.